Putturu: ಕೆಎಸ್‌ಆರ್‌ಟಿಸಿ ಬಸ್ಸು-ಬೈಕ್ ನಡುವೆ ಭೀಕರ ಅಪಘಾತ; ಓರ್ವ ಸಾವು

Putturu: ಪುತ್ತೂರು-ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪದಲ್ಲಿ ಇಂದು (ಮೇ 11) ಸರಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಬಸ್, ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ವೇಳೆ ಬೈಕ್‌ನಲ್ಲಿದ್ದ ಸವಾರರು ಗಂಭೀರ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಓರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರರಿಬ್ಬರು ಬಂಟ್ವಾಳ ತಾಲೂಕಿನ ನರಿಕೊಂಬಿನವರು ಎಂದು ವರದಿಯಾಗಿದೆ.
Comments are closed.