Mandya: ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು: ಕಾವೇರಿ ನದಿಯಲ್ಲಿ ಶವ ಪತ್ತೆ!

Share the Article

Mandya: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರ ಶವ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ನಿಗೂಢವಾದ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ಶವ ಮೇಲೆತ್ತಿಸಿದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ ಅವರ ಸ್ಕೂಟರ್ ಪತ್ತೆಯಾಗಿದೆ.ಈ ಶ್ರೀರಂಗಪಟ್ಟಣ ಪೊಲೀಸರು ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Comments are closed.