Gadaga: ಹೂವು ತರಲು ಹೋಗಿದ್ದ ಮಹಿಳೆ ಮೇಲೆ ಬೀದಿನಾಯಿ ದಾಳಿ: ಮಹಿಳೆ ಸಾವು

Gadaga: ಗದಗ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಬೀದಿನಾಯಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಪ್ರೇಮವ್ವ ಚೋಳಿನ (52) ಮೃತ ಮಹಿಳೆ.
ಹೂವು ತರಲೆಂದು ಹೋಗುತ್ತಿದ್ದ ಮಹಿಳೆ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸಾವಿಗೀಡಾಗಿದ್ದಾರೆ. ಸ್ಥಳೀಯರು ಘಟನೆಯಿಂದ ಪುರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Comments are closed.