Kasaragod: ಚೆರ್ವತ್ತೂರು ರಾ.ಹೆದ್ದಾರಿ ಕಾಮಗಾರಿ ಸಂದರ್ಭ ಗುಡ್ಡ ಕುಸಿತ: ಓರ್ವ ಸಾವು

Share the Article

Kasaragod: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣಿನಡಿಗೆ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಚೆರ್ವತ್ತೂರು ಎಂಬಲ್ಲಿ ನಡೆದಿದೆ.

ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ರಸ್ತೆಯ ಬದಿಯ ಗುಡ್ಡ ಕುಸಿದ ಪರಿಣಾಮ ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು. ಗಾಯಗೊಂಡ ಕಾರ್ಮಿಕರನ್ನು ಚೆರ್ವತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಲ್ಲಿ ಮಣ್ಣಿನಡಿಯಲ್ಲಿ ನಾಲ್ವರು ಸಿಲುಕಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹರಸಾಹಸ ಪಟ್ಟು ನಾಲ್ವರು ಮೇಲೆತ್ತಿದ್ದಾರೆ. ಈ ಪೈಕಿ ಓರ್ವ ಮೃತಪಟ್ಟಿದ್ದಾರೆ. ಉಳಿದ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರ್ಮಿಕೆರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗಿದೆ.

Comments are closed.