Rakesh Poojary: ರಾಕೇಶ್ ಪೂಜಾರಿ ನಿಧನ ವಿಚಾರ – ಸಾವಿಗೂ ಮುನ್ನ ಮೆಹಂದಿ ಕಾರ್ಯಕ್ರಮದಲ್ಲಿ ಆಗಿದ್ದೇನು?

Share the Article

Rakesh Poojary: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಹೃದಯಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಇದೀಗ ಸಾವಿಗೆ ಮುನ್ನ ಅಲ್ಲಿ ಏನಾಗಿತ್ತು ಎಂಬುದನ್ನು ಅವರ ಸ್ನೇಹಿತರು ತಿಳಿಸಿದ್ದಾರೆ.

ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಾರ್ಯಕ್ರಮದಲ್ಲಿ ಆಗಿದ್ದೇನು?

ಮೂಲಗಳ ಪ್ರಕಾರ ಅವರ ಉಡುಪಿಯ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಎಲ್ಲರೊಂದಿಗೆ ರಾಕೇಶ್ ಅವರು ಡ್ಯಾನ್ಸ್ ಮಾಡುತ್ತಿದ್ದರು. ಡ್ಯಾನ್ಸ್ ಮಾಡುವಾಗ ನೋಡು ನಡುವೆ ಅವರು ಎದೆಯನ್ನು ಮುಟ್ಟಿ ನೋಡಿಕೊಳ್ಳುತ್ತಿದ್ದರು. ಹೀಗಿರುವಾಗ ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Comments are closed.