Rakesh Poojary : ರಾಕೇಶ್ ಪೂಜಾರಿ ಕೊನೆ ಕ್ಷಣದ ವಿಡಿಯೋ ವೈರಲ್ !!

Rakesh Poojary: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಹೃದಯಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಇದೀಗ ಅವರ ಕೊನೆ ಕ್ಷಣದ ವಿಡಿಯೋ ವೈರಲ್ ಆಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಂದಹಾಗೆ ಗೆಳೆಯರೊಬ್ಬರ ಮೆಹಂದಿ ಕಾರ್ಯಕ್ರಮಕ್ಕೆ ರಾಕೇಶ್ ಪೂಜಾರಿ (Rakesh Poojary) ಸರ್ಪ್ರೈಸ್ ವಿಸಿಟ್ ಕೊಟ್ಟಿದ್ದರು. ಗೆಳೆಯರ ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದರು. ಮಧ್ಯ ರಾತ್ರಿವರೆಗೂ ಅವರು ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದರು. ಅಲ್ಲದೆ ಡ್ಯಾನ್ಸ್ ಮಾಡೋ ವೇಳೆ ಅವರು ಎದೆ ಹಿಡಿದುಕೊಂಡಿರೋದು ಕಂಡು ಬಂದಿದೆ.
ಇನ್ನು ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು.
Comments are closed.