Gruhalakshmi :ಮಹಿಳೆಯರ ಖಾತೆಗೆ 6,000 ರೂ ಗೃಹಲಕ್ಷ್ಮಿ ಹಣ !!

Share the Article

Gruhalakshmi : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು. ಈ ಯೋಜನೆಯ ಮೂಲಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಂತಹ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ ಹಣ ಸಿಗುತ್ತದೆ. ಅದರೀಗ ರಾಜ್ಯ ಸರ್ಕಾರವು ಕೆಲವು ತಿಂಗಳಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಹಣವನ್ನು ನೀಡಿರಲಿಲ್ಲ. ಇದೀಗ ಹಂತ ಹಂತವಾಗಿ 6,000 ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ತಯಾರಿ ನಡೆಸಿದೆ.

ಹೌದು, ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳು ಹಣ ಬಾಕಿ ಉಳಿದಿದೆ. ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ದುಡ್ಡು 6000 ಹಣ ಕೈ ಸೇರಲಿದೆ.

Comments are closed.