Neliyadi: ಯುವಕನ ಬರ್ಬರ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

Neliyadi: ನೆಲ್ಯಾಡಿ (Neliyadi) ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದ್ದ ಮನಕಲಕುವ ಘಟನೆಯಲ್ಲಿ, ಶರತ್ ಕುಮಾರ್ (34) ಎಂಬ ಯುವಕನನ್ನು ಮರದ ದೊಣ್ಣೆಯಿಂದ ಬಡಿದು ಬರ್ಬರವಾಗಿ ಕೊಲೆಗೈಯಲಾಗಿತ್ತು. ಈ ಭೀಕರ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಹರಿಪ್ರಸಾದ್ ಎಂಬಾವನನ್ನು ಉಪ್ಪಿನಂಗಡಿ ಪೊಲೀಸರು ಪೆರಿಯಶಾಂತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಶರತ್ ಕುಮಾರ್ ತನ್ನ ಚಿಕ್ಕಪ್ಪನ ಮನೆಯವರೊಂದಿಗೆ ವಾಗ್ವಾದದಲ್ಲಿ ತೊಡಗಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ, ಆರೋಪಿ ಹರಿಪ್ರಸಾದ್, ಶರತ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಚಿಕ್ಕಪ್ಪನ ಮನೆಯಂಗಳದಲ್ಲಿಯೇ ನಡೆದ ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಶರತ್ ಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
Comments are closed.