Bangalore: ಮೋದಿ ಮನೆ ಮೇಲೆ ಬಾಂಬ್ ಹಾಕಿ ಎಂದು ವಿಡಿಯೋ ಮಾಡಿದ ವ್ಯಕ್ತಿ ಅರೆಸ್ಟ್

Bangalore: ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟ ನವಾಜ್ ಎಂಬುವವನ್ನು ಬಂಧನ ಮಾಡಲಾಗಿದೆ.

ಬೆಂಗಳೂರಿನ ಬಂಡೆಪಾಳ್ಯ ಠಾಣೆ ಪೊಲೀಸರು ಆರೋಪಿ ನವಾಜ್‌ನನ್ನು ಬಂಧನ ಮಾಡಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಪಬ್ಲಿಕ್ ಸರ್ವೆಂಟ್ ಐಡಿಯಲ್ಲಿ ನವಾಜ್ ವಿಡಿಯೋ ಮಾಡಿದ್ದು, ಸಂಘರ್ಷದಲ್ಲಿ ಪ್ರಧಾನಿ ಮೋದಿ ಮನೆ ಮೇಲೆ ಏಕೆ ಬಾಂಬ್ ಬೀಳುತ್ತಿಲ್ಲ. ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ ಎಂದು ವಿಡಿಯೋ ಮಾಡಿದ್ದ. ಅದನ್ನು ಜಾಲತಾಣದಲ್ಲಿ ವೈರಲ್ ಮಾಡಿದ್ದ ಈತನನ್ನು ಬಂಡೆಪಾಳ್ಯ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
Comments are closed.