Mangaluru: ಮಂಗಳೂರು: ಬಾಲಕಿ ರಕ್ತಸ್ರಾವದಿಂದ ಸಾವು: ಗರ್ಭಿಣಿಯೆಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢ!

Share the Article

Mangaluru: ಕಾಸರಗೋಡಿನ ವಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲೆಯೊಬ್ಬಳು ತೀವ್ರ ರಕ್ತಸ್ರಾವದಿಂದಾಗಿ ದಾರುಣವಾಗಿ ಸಾವನ್ನಪ್ಪಿದ್ದಾಳೆ.

ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಸುಮಾರು ನಾಲ್ಕೂವರೆ ತಿಂಗಳ ಗರ್ಭಿಣಿಯಾಗಿದ್ದಳು ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.

ಬಾಲಕಿಯನ್ನು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಮಂಗಳೂರಿನ (Mangaluru) ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಆಕೆ ಕೊನೆಯುಸಿರೆಳೆದಿದ್ದಾಳೆ. ಮಂಗಳೂರಿನ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷೆಯು ಆಕೆಯ ಗರ್ಭಧಾರಣೆಯನ್ನು ದೃಢಪಡಿಸಿದ್ದು, ಸಾವಿನ ನಿಖರ ಕಾರಣವನ್ನು ತಿಳಿಯಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಗರ್ಭಪಾತ ಮಾಡಿಕೊಳ್ಳಲು ಯಾವುದೋ ಔಷಧವನ್ನು ಸೇವಿಸಿರಬಹುದೆಂಬ ಗಂಭೀರ ಶಂಕೆ ವ್ಯಕ್ತವಾಗಿದೆ. ಈ ಔಷಧದ ಅಡ್ಡಪರಿಣಾಮದಿಂದ ತೀವ್ರ ರಕ್ತಸ್ರಾವ ಉಂಟಾಗಿ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Comments are closed.