Udupi : ಉಡುಪಿ: ಅಕ್ರಮ ಮದ್ಯ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್.!

Share the Article

Udupi: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ (Udupi) ಪೊಲೀಸರು 76 ಬಡಗುಬೆಟ್ಟು ಗ್ರಾಮದ ಬಲಾಯಿಪಾದೆ ಜಂಕ್ಷನ್ ಬಳಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್‌ ಎಂದು ಗುರುತಿಸಲಾಗಿದೆ.

ಆರೋಪಿಗಳಿಬ್ಬರ ಬಳಿ ಇದ್ದ ವಿವಿಧ ಬ್ಯಾಂಡ್‌ನ ಮದ್ಯದ ಸಾಚೇಟ್, ಬೀಯರ್ ಬಾಟಲ್, ನೀರಿನ ಬಾಟಲ್‌ಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.