Kadaba: ಕಡಬ: ಟೆಂಪೋ ಟ್ರಾವೆಲ‌ರ್-ಕಾರು ಢಿಕ್ಕಿ: 4 ಮಂದಿಗೆ ಗಾಯ!

Share the Article

Kadaba: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿಡುವ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ.

ಗಾಯಗೊಂಡವರನ್ನು ಕಡಬ ತಾಲೂಕು ಆಲಂಕಾರು ನಿವಾಸಿಗಳಾದ ಪದ್ಮನಾಭ, ಸುದರ್ಶನ್, ಚೇತನ್, ಸತೀಶ್ ಎಂದು ಗುರುತಿಸಲಾಗಿದೆ. ಗಾಯಗೊಂಡವರ ಪೈಕಿ ಗಂಭೀರ ಸ್ವರೂಪದ ಗಾಯಗಳಾಗಿರುವ ಪದ್ಮನಾಭ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಮೂಲದ ಯಾತ್ರಿಕರು ಟೆಂಪೋ ಟ್ರಾವೆಲರ್‌ನಲ್ಲಿ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಶಿವಮೊಗ್ಗ ಮೂಲದ ಯಾತ್ರಿಕರು ಟೆಂಪೋ ಟ್ರಾವೆಲರ್‌ನಲ್ಲಿ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

Comments are closed.