Karnataka Gvt: ಪ್ರಾಥಮಿಕ, ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ – ಸರ್ಕಾರದಿಂದ ಅಧಿಸೂಚನೆ

Karnataka Gvt: 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖೀತ ಪರೀಕ್ಷೆ ನಡೆಸಿ ಭರ್ತಿ ಮಾಡುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ.
ಹೌದು, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಅಧಿಸೂಚನೆಯೊಂದನ್ನು ಹೊರಡಿಸಿದೆ. 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಎಂಬ ವಿಷಯವನ್ನು ಅಧಿಸೂಚನೆ ಒಳಗೊಂಡಿದೆ.
ತಲಾ 85 ಅಂಕಗಳಿಗೆ ಲಿಖಿತ ಪರೀಕ್ಷೆ -1 ಮತ್ತು 2 ನಡೆಸಲಾಗುವುದು. ಅಭ್ಯರ್ಥಿಗಳ ಹೆಚ್ಚಿನ ವಿದ್ಯಾರ್ಹತೆಗೆ 20 ಅಂಕಗಳು, ಸೇವಾ ಅನುಭವಕ್ಕೆ 10 ಅಂಕಗಳು ಸೇರಿ 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 26ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ 8 ರಿಂದ 10 ರವರೆಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 26ರ ವರೆಗೆ ಅರ್ಜಿ ಸಲ್ಲಿಸಬಹುದು. ಜೂನ್ 8ರಿಂದ 10ರ ವರೆಗೆ ಪರೀಕ್ಷೆ ನಡೆಸಲಾಗುತ್ತದೆ.
Comments are closed.