Ramanagara: ಮೂಕ ಬಾಲಕಿಯನ್ನು ಅತ್ಯಾಚಾರವೆಸಗಿ ಭೀಕರ ಕೊಲೆ!

Share the Article

Ramanagara: ರವಿವಾರ ಎ 11 ರಂದು ರಾಮನಗರ (Ramanagara) ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14 ವರ್ಷ) ನಾಪತ್ತೆಯಾಗಿದ್ದರು. ಮರುದಿನ ಸೋಮವಾರ (ಮೇ.12) ರಂದು ಖುಷಿಯ ಶವ ಭದ್ರಾಪುರ ಗ್ರಾಮ ಸಮೀಪದ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿತ್ತು.

ಇದೀಗ ಖುಷಿ ಕುಟುಂಬಸ್ಥರು ಬಾಲಕಿಯನ್ನು ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪೊಲೀಸರು ಕೆಲ ಸಾಕ್ಷ್ಯಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕೆಲವು ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಕಲಚೇತನ ಬಾಲಕಿ ಖುಷಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ವಿಚಾರ ತಿಳಿದ ಬುಧವಾರ (ಮೇ.14) ಗ್ರಾಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರಿಗೆ ಪರಿಹಾರದ ಚೆಕ್‌ ವಿತರಣೆ ಮಾಡಿ, ಸೂಕ್ತ ತನಿಖೆ ನಡೆಸಿ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.

Comments are closed.