Medical Course Fee: ವೈದ್ಯಕೀಯ ಕೋರ್ಸ್‌ ಮಾಡುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌

Share the Article

Medical Course Fee: ರಾಜ್ಯದ ವೈದ್ಯಕೀಯ ಶಿಕ್ಷಣ ವ್ಯಾಸಂಗದ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ. ಈ ವರ್ಷ ಯಾವುದೇ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ವರ್ಷವೂ ಶೇ.15ರಷ್ಟು ಶುಲ್ಕ ಹೆಚ್ಚಳಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದ್ದವು.

ಆದರೆ, ಗುರುವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾವನೆ ತಿರಸ್ಕರಿಸಿ, ಯಾವುದೇ ಕಾರಣಕ್ಕೂ ಈ ವರ್ಷ ಶುಲ್ಕ ಹೆಚ್ಚಿಸುವುದಿಲ್ಲ ಎಂದು ಆಡಳಿತ ಮಂಡಳಿ ಪ್ರತಿನಿಧಿ ಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ಸಂಬಂಧ ಮಾಹಿತಿ ನೀಡಿರುವ ಅವರು, ಕಳೆದ ವರ್ಷ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಶುಲ್ಕ ಹೆಚ್ಚಿಸಲು ಒಪ್ಪಿದ್ದೇವು. ಈ ವರ್ಷ ಸಾಧ್ಯವಿಲ್ಲ ಎಂದಿದ್ದೇವೆ ಎಂದರು.

Comments are closed.