Asha Workers: ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – ಗೌರವ ಧನ ಹೆಚ್ಚಿಸಿದ ಮಾಡಿದ ಸರ್ಕಾರ!!

Share the Article

 

Asha Workers: ರಾಜ್ಯದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಿಸಿದ ಬೆನ್ನಲ್ಲೇ ಸರ್ಕಾರವು ಇದೀಗ ಆಶಾ ಕಾರ್ಯಕರ್ತೆಯರ ಗೌರವದನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

 

ಕಳೆದ ಬಜೆಟ್ ನಲ್ಲಿ ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದಾಗಿ ಘೋಷಣೆ ಮಾಡಿತ್ತು. ಅಂತೆಯೇ ಇದೀಗ ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

 

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.

Comments are closed.