Honorarium of Guest Teachers: ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ, ಗೌರವಧನ 2 ಸಾವಿರ ರೂ ಹೆಚ್ಚಳ

Share the Article

Honorarium of Guest Teachers: ರಾಷ್ಟ್ರೀಯ ಆರೋಗ್ಯ ಮಿಷನ್‌ನಡಿ ನೇಮಕಗೊಳ್ಳುವ ವೈದ್ಯರು, ತಜ್ಞವೈದ್ಯರ, ವೇತನ ಪರಿಷ್ಕರಿಸಿದ ಬೆನ್ನಿಗೆ ರಾಜ್ಯ ಸರಕಾರವು ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿರುವಂತೆ ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಅತಿಥಿ ಶಿಕ್ಷಕರು ಹಾಗೂ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂ ಹೆಚ್ಚಿಸಿ ಸರಕಾರ ಆದೇಶ ಹೊರಡಿಸಿದೆ. 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಇದು ಅನ್ವಯ ಆಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಗುರುವಾರ ಈ ಆದೇಶ ಹೊರಡಿಸಿದೆ.

 

Comments are closed.