2nd PUC: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ರಿಸಲ್ಟ್ ನೋಡುವುದು ಹೇಗೆ?

2nd PUC: ದ್ವಿತೀಯ ಪಿಯುಸಿ ಪರೀಕ್ಷೆ-2 (2nd PUC Exam 2 Result 2025) ಫಲಿತಾಂಶ ಇಂದು ಪ್ರಕಟವಾಗಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ರ ದಿನಾಂಕವು ಘೋಷಣೆಯಾಗಿದೆ.
ಹೌದು, ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.inನಲ್ಲಿ ನೋಡಬಹುದು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ ಕೇವಲ 60,692 ಮಂದಿ ಉತ್ತೀರ್ಣರಾಗಿದ್ದು, ಶೇ.31.27 ಫಲಿತಾಂಶ ಹೊರ ಬಿದ್ದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿಯನ್ನು ತಿಳಿಸಿದ್ದಾರೆ.
ಅಂದಹಾಗೆ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಬಿಡುಗಡೆ ಮಾಡಿದ್ದು,ಅದರಲ್ಲಿ 4.76 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎರಡೂ ಪರೀಕ್ಷೆಗಳಿಂದ ಉತ್ತೀರ್ಣರಾದವರ ಸಂಖ್ಯೆ 5.36 ಲಕ್ಷಕ್ಕೆ ಏರಿಕೆಯಾಗಿದೆ. ಒಟ್ಟಾರೆ ಫಲಿತಾಂಶ ಶೇ 77.96 ರಷ್ಟು ಇದೆ.
ಫಲಿತಾಂಶ ನೋಡುವುದು ಹೇಗೆ?
ನೀವು ಮೋದಲು ಅಧಿಕೃತ ವೆಬ್‌ಸೈಟ್ ಆದ https://karresults.nic.in/ ಅಥವಾ kseab.karnataka.gov.in ಗೆ ಭೇಟಿ ನೀಡಬೇಕು. ತದನಂತರ ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ. ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025 ಎಂಬುದು ಪರೆದೆಯ ಮೇಲೆ ಕಾಣಿಸುತ್ತದೆ. ಅಲ್ಲಿ ನೀವು ಫಲಿತಾಂಶವನ್ನು ನೋಡಬಹುದು.ನಂತರ ಅದನ್ನು ಡೌನ್ಲೋಡ್ ಅಥವಾ ಪ್ರಿಂಟ್ ಔಟ್ ತಗೆದುಕೊಳ್ಳಬಹುದು. ಹೀಗೆ ನೀವು ಈ ಕಮೇಲಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ನೋಡಬಹುದು.
Comments are closed.