Mangalore: ರೈಲಿನಲ್ಲಿ ಕುಳಿತಿದ್ದ ವ್ಯಕ್ತಿ ಹೃದಯಾಘಾತ: ಸಾವು

Mangalore: ರೈಲಿನ ಜನರಲ್ ಕೋಚ್‌ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಉಂಟಾಗಿ ಸಾವಿಗೀಡಾದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ನಿನ್ನೆ (ಮೇ 17) 3.30 ರ ಸುಮಾರಿಗೆ ಮಂಗಳೂರು ಚೆನ್ನೈಮೇಲ್ ಎಕ್ಸ್‌ಪ್ರೆಸ್‌ನ ಜನರಲ್ ಕೋಚ್‌ನಲ್ಲಿ 45 ವರ್ಷದ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿದೆ.
ಕೂಡಲೇ ಆರ್‌ಪಿಎಫ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ಯಾದವ್ ಮತ್ತು ಸಿಬ್ಬಂದಿಗಳು ಸಿಪಿಆರ್ ಕೊಡಿಸಿದ್ದಾರೆ. ನಂತರ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4 ಗಂಟೆಗೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ವ್ಯಕ್ತಿಯ ಕುರಿತು ಮಾಹಿತಿ ಲಭ್ಯವಾಗಿಲ್ಲ.
Comments are closed.