Raichur: ಇಡ್ಲಿ ತಿನ್ನಲು ಹೋಗಿದ್ದ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರ ಕೊಲೆ

Raichur: ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಂದು(ಮೇ.18) ರ ಬೆಳಗಿನ ಜಾವ 4.30ರ ಸುಮಾರಿಗೆ ನಡೆದಿದೆ.
ರಾಯಚೂರು ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ಯುವಕನ ಕೊಲೆ ನಡೆದಿದೆ. ಜಹೀರಾಬಾದ್‌ನ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕ. ಈತ ಇಡ್ಲಿ ತಿನ್ನಲೆಂದು ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲೆ ದುಷ್ಕರ್ಮಿಗಳು ಮನಸೋಇಚ್ಛೆ ಚಾಕುವಿನಿಂದ ಸಾದಿಕ್ ದೇಹಕ್ಕೆ ಚುಚ್ಚಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾದಿಕ್‌ನನ್ನು ಆಸ್ಪತ್ರೆಗೆ ಸಾಗಿಸುವಾಗ, ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಸದರ್ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಗೆ ಹಳೇ ವೈಷ್ಯಮ್ಯವೇ ಕಾರಣ ಇರಬಹುದು ಎಂದು ತಿಳಿಸಿದ್ದಾರೆ. ಪ್ರಕರಣ ದಾಖಲು ಮಾಡಲಾಗಿದೆ.
Comments are closed.