Dakshina Kannada: ಗುಂಡ್ಯದಲ್ಲಿ ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌-ಲಾರಿ ಮುಖಾಮುಖಿ ಡಿಕ್ಕಿ

Share the Article

Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪದ ತಿರುವೊಂದರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಬಸ್‌ ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ 100 ಮೀಟರ್‌ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಅಲ್ಲಿ ನೆರೆದಿರುವವರು ಹೇಳಿರುವ ವರದಿಯಾಗಿದೆ. ಅಪಘಾತದ ಪರಿಣಾಮದಿಂದ ಬಸ್ಸಿನ ಮುಂಭಾಗ ಹಾಗೂ ಲಾರಿಯ ಮುಂಭಾಗಕ್ಕೆ ಹಾನಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ವಾಹನ ನಿಂತಿದ್ದರಿಂದ ಸುಮಾರು 5 ಕಿ.ಮೀ.ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತಿದ್ದವು. ಹೀಗಾಗಿ ವಾಹನ ದಟ್ಟಣೆಯೂ ಅಧಿಕವಾಗಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿರುವ ಕುರಿತು ವರದಿಯಾಗಿದೆ.

 

Comments are closed.