Bengaluru : ಮೂಕ ಬಾಲಕಿಯ ಕೊಲೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್ – ಸಿಸಿಟಿವಿಯಲ್ಲಿ ಸೆರೆಯಾಯಿತು ಬಾಲಕಿ ಸಾವಿನ ಅಸಲಿ ಕಾರಣ

Bengaluru : ಬೆಂಗಳೂರಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೊನಿಯಲ್ಲಿ ವಾರದ ಹಿಂದೆ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಶವವಾಗಿ ಪತ್ತೆಯಾಗಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಸಿಸಿಟಿವಿಯಲ್ಲಿ ಬಾಲಕಿಯ ಸಾವಿನ ಕಾರಣ ಬಹಿರಂಗವಾಗಿದೆ.
ಹೌದು, ಅತ್ಯಾಚಾರದ ಮಾಡಿ ಬಾಲಕಿಯನ್ನು ಕೊಲ್ಲಲಾಗಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯಿಂದ ದೃಢಪಟ್ಟಿತ್ತು. ಈ ಬೆನ್ನಲ್ಲೇ ರೈಲು ಡಿಕ್ಕಿ ಹೊಡೆದು ಬಾಲಕಿ ಮೃತಪಟ್ಟಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಂದಹಾಗೆ ಮರಣೋತ್ತರ ಪರೀಕ್ಷೆಯಲ್ಲಿ ಹೆಡ್ ಇಂಜುರಿಯಿಂದ ಬಾಲಕಿ ಸಾವನ್ನಪ್ಪಿರುವುದಾಗಿ ದೃಢವಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಬಾಲಕಿ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾಳೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಅಲ್ಲದೇ ರೈಲು ಡಿಕ್ಕಿಯಾಗಿರುವ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Comments are closed.