Dinesh Gundurao: ಪಂಜಾಬ್‌ನಲ್ಲಿ ಧರ್ಮಸ್ಥಳ ಮೂಲದ ಯುವತಿ ಸಾವು ಪ್ರಕರಣ: ಸೂಕ್ತ ತನಿಖೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

Dinesh Gundurao: ಪಂಜಾಬ್‌ನಲ್ಲಿ ಧರ್ಮಸ್ಥಳ ಮೂಲದ ಯುವತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ದಿನೇಶ್ ಗುಂಡೂರಾವ್ ಅವರು ಸೂಕ್ತ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.
ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್‌ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎನ್ನುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪ ಮಾಡಿದ್ದಾರೆ. ಆಕಾಂಕ್ಷ ನಿಗೂಢ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ಮಾಡುವಂತೆ ನಾನು ಪಂಜಾಬ್ ಸರಕಾರವನ್ನು ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.
Comments are closed.