C T Ravi: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ!!

C T Ravi: ವಿಧಾನಪರಿಷತ್ ಅಧಿವೇಶನದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ (Lakshmi Hebbalkar) ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣ ಧಾಖಲಾಗಿ ತನಿಖೆ ನಡೆಯುತ್ತಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೌದು, ಸಿ ಟಿ ರವಿ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು(ಮೇ 19) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಸುಪ್ರೀಂಕೋರ್ಟ್ ಪೀಠ, ಸಿ.ಟಿ. ರವಿ ವಿರುದ್ಧ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.
Comments are closed.