ಜನೌಷಧಿ ಕೇಂದ್ರಗಳ ಬಂದ್ ಗೆ ರಾಜ್ಯ ಸರ್ಕಾರ ಸೂಚನೆ?

Share the Article

Bengaluru: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಬಂದ್‌ ಮಾಡುವಂತೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್​ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಚೀಟಿಗಳನ್ನು ನೀಡುವುದನ್ನು ಸರ್ಕಾರವು ನಿಷೇಧಿಸಿದೆ. ಹಾಗೂ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ತರಹದ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದ್ದು, ಈ ನಿಟ್ಟಿನಲ್ಲಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ಆದೇಶ ನೀಡಲಾಗಿದೆ.

ಪರಿಶೀಲನಾ ಹಂತದಲ್ಲಿ ಇರುವ 31 ಜನ ಔಷಧ ಕೇಂದ್ರಗಳ ಅರ್ಜಿಗಳಿಗೆ ಅನುಮತಿ ನೀಡದಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚನೆ ನೀಡಿದ್ದು, ಜನ ಔಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಯನ್ನು ಕೂಲಂಕಷವಾಗಿ ಪರಿಶೀಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಆದರೆ ಅಧಿಸೂಚನೆಯ ಪ್ರಕಾರ ಸರಕಾರಿ ಆಸ್ಪತ್ರೆಗಳ ಹೊರಗಡೆ ಇರುವಂತಹ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬಾರದ ಕಾರಣ ಅವುಗಳು ಯಥಾವತ್ತಾಗಿ ಮುಂದುವರೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Comments are closed.