Dharmasthala : ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಪ್ರಕರಣ – ಪೊಲೀಸ್ ತನಿಖೆಯಲ್ಲಿ ಅನ್ಯಾಯ, ಅದನ್ನು ಒಪ್ಪಲ್ಲ ಎಂದ ಆಕಾಂಕ್ಷ ತಂದೆ!!

Dharmasthala : ಮೇ 17 ರಂದು ಪಂಜಾಬ್ ನಲ್ಲಿ ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ನಿಗೂಢವಾಗಿ ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಪೊಲೀಸರ ತನಿಖೆಯಲ್ಲಿ ಟ್ವಿಸ್ಟ್ ಸಿಕ್ಕಿ, ವಿವಾಹಿತ ಪುರುಷನೊಂದಿಗಿನ ಪ್ರೀತಿ ವೈಫಲ್ಯವೇ ಈಕೆ ಸಾವಿಗೆ ಕಾರಣ ಎಂದು ತಿಳಿಸಲಾಗಿತ್ತು. ಆದರೆ ಇದೀಗ ಆಕಾಂಕ್ಷಾಳ ಪೋಷಕರು ಈ ಕಾರಣವನ್ನು ಅಲ್ಲಗಳದಿದ್ದಾರೆ.
ಹೌದು, ಮಗಳು ಖಿನ್ನತೆಯಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ದಾಖಲಿಸಿರುವುದನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ಆಕಾಂಕ್ಷ ಅವರ ತಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ ತನಿಖೆಯ ಭರವಸೆ ನೀಡಿದ್ದ ಪೊಲೀಸರು ಇದೀಗ ತಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸುತ್ತಿದ್ದಾರೆ.
ಅಲ್ಲದೆ ಘಟನೆ ನಡೆದ ದಿನದ ಕಾಲೇಜಿನ ಸಿಸಿಟಿವಿ ಕ್ಯಾಮರಾ ಫೂಟೇಜ್ ಗಳನ್ನು ಸರಿಯಾಗಿ ನೀಡುತ್ತಿಲ್ಲ. ಆಕಾಂಕ್ಷಾ ಕೆಳಗೆ ಬೀಳುವ ದೃಶ್ಯಗಳನ್ನು ಮಾತ್ರ ತೋರಿಸಲಾಗುತ್ತಿದೆ. ಆಕೆ ಹೇಗೆ ಬಿದ್ದಳು ? ಯಾರಾದರೂ ತಳ್ಳಿದರೇ? ಅಥವಾ ಆಕೆ ಹಾರಿದಳೇ ಎಂಬುದು ಎಲ್ಲೂ ಕಾಣಿಸುತ್ತಿಲ್ಲ. ಸಿಸಿಟಿವಿ ಕ್ಯಾಮರಾದ ಸಂಪೂರ್ಣ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದ್ದೇವೆ. ಆದರೆ ಅದನ್ನು ನೀಡಲು ಸಂಬಂಧಪಟ್ಟವರು ಸಿದ್ಧರಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಭರವಸೆ ನೀಡಿರುವುದಾಗಿ ತಿಳಿಸಿದ ಅವರು ಇದೀಗ ಎರಡನೇ ಬಾರಿಗೆ ದೂರನ್ನು ಪೊಲೀಸರು ಸ್ವೀಕರಿಸಿದ್ದು, ಯಾವ ರೀತಿ ಪ್ರಕರಣ ದಾಖಲಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.
Comments are closed.