Crime: ರಜೆಗೆ ಊರಿಗೆ ಬಂದಿದ್ದ ಯೋಧನ ಮೇಲೆ ಮಚ್ಚಿನಿಂದ ಹಲ್ಲೆ!

Crime: ಜಮೀನು ವ್ಯಾಜ್ಯ ಅತಿರೇಕಕ್ಕೆ ಹೋದ ಪರಿಣಾಮ CRPF ಯೋಧನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ರಾಯಚೂರಿನ ಲಿಂಗಸುಗೂರಿನ ಕಸಬಾದಲ್ಲಿ ಈ ಘಟನೆ ನಡೆದಿದೆ.

ಹಲ್ಲೆಗೊಳಗಾಗ ಯೋಧನನ್ನು ಕಸಬಾ ಲಿಂಗಸುಗೂರು ಗ್ರಾಮದ ಸಿಆರ್ಪಿಎಫ್ ಎಎಸ್ಐ ಚನ್ನಬಸಪ್ಪ ಎಂದು ಗುರುತಿಸಲಾಗಿದೆ. ದೆಹಲಿಯಿಂದ ಆಸ್ಸಾಂಗೆ ವರ್ಗಾವಣೆಯಾದ ಹಿನ್ನೆಲೆ ರಜೆ ಮೇಲೆ ಊರಿಗೆ ಬಂದಿದ್ದ ಯೋಧನ ಮೇಲೆ ಹಲ್ಲೆ ನಡೆದಿದೆ.
ವಾಕಿಂಗ್ ಮಾಡುತ್ತಿದ್ದಾಗ ಏಕಾಏಕಿ ಬಂದ ಅಮರೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಚನ್ನಬಸಪ್ಪ ತಪ್ಪಿಸಿಕೊಂಡು ಓಡಿದ್ದು, ಆದರೂ ಬಿಡದೇ ಬೆನ್ನಟ್ಟಿ ಹಲ್ಲೆಗೆ ಮುಂದಾಗಿದ್ದಾರೆ. ಆಗ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ. ಸದ್ಯ ಗಾಯಾಳು ಯೋಧನನ್ನ ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.
Comments are closed.