Dakshina Kannada: ಗುಂಡ್ಯದಲ್ಲಿ ಮತ್ತೆ ಕೆಎಸ್‌ಆರ್‌ಟಿಸಿ ಬಸ್-ಲಾರಿ ಅಪಘಾತ

Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿತ್ತು.
ಎರಡು ದಿನಗಳ ಹಿಂದೆ, ಭಾನುವಾರ (ಮೇ 18) ರಂದು ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಎರಡೈ ವಾಹನಗಳ ಚಾಲಕರು ಸೇರಿ ನಾಲ್ವರು ವ್ಯಕ್ತಿಗಳು ಗಾಯಗೊಂಡ ಘಟನೆ ನಡೆದಿತ್ತು.
Comments are closed.