Heavy Rain: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ; ಮೂರು ದಿನ ಆರೆಂಜ್ ಅಲರ್ಟ್

Mangalore: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ತಡರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಪುತ್ತೂರು ತಾಲ್ಲೂಕುಗಳ ಅನೇಕ ಕಡೆಗಳಲ್ಲಿ ಮಳೆಯಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ ಮುನ್ಸೂಚನೆಯಂತೆ ಮೇ 21 ರಂದು ರೆಡ್ ಅಲರ್ಟ್, ಮೇ 22, 23 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ದೋಣಿಗಳು ದಡ ಸೇರುವಂತೆ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸೂಚನೆ ನೀಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ, ತೀರಕ್ಕೆ ತೆರಳಬಾರದು ಎಂದು ತಿಳಿಸಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ಉಚಿತ 1077/0824-2442590, ಮಂಗಳೂರು ಮನಪಾ- 0824-2220306/2220319,ಮಂಗಳೂರು – 0824-2220587-0824-2204424, -7337669102, -08251-230349, 08256-232047, 2-08257-231231, 08258-238100, -08251-260435, 0824-2294496 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.
Comments are closed.