Mangaluru: ಕಾನೂನು ಬಾಹಿರ ಜಾಹೀರಾತು: ʼನೋ ಸ್ಯಾಟ್ʼ ಸಂಸ್ಥೆ ವಿರುದ್ಧ FIR

Mangaluru: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಸರಕಾರದಿಂದ ಪರವಾನಗಿ ಪಡೆಯದೆ ಕಾನೂನು ಬಾಹಿರವಾಗಿ ಜಾಹೀರಾತು ನೀಡಿದ ಪಂಪ್‌ವೆಲ್‌ನ ʼನೋ ಸ್ಯಾಟ್ ಪ್ರೈವೇಟ್ ಲಿಮಿಟೆಡ್ʼ ಸಂಸ್ಥೆ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

ʼನೊ ಸ್ಯಾಟ್_ಕ್ಯಾರಿಯರ್ʼ ಎಂಬ ಇನ್‌ಸ್ಟಾಗ್ರಾಮ್‌ನಲ್ಲಿ ಶುಕ್ರವಾರ ವಿದೇಶದಲ್ಲಿ ಉದ್ಯೋಗ ಕೊಡಿಸುವ ಕುರಿತು ಜಾಹೀರಾತು ಪ್ರಕಟವಾಗಿತ್ತು. ಆದರೆ ಇದಕ್ಕೆ ಯಾವುದೇ ಪರವಾನಗಿಯನ್ನು ಪಡೆದಿರಲಿಲ್ಲ. ಇದು 1983 ರ ವಲಸೆ ಕಾಯ್ದೆಯ ಸೆಕ್ಷನ್ 10 ಮತ್ತು ಸೆಕ್ಷನ್ 24 ರ ಉಲ್ಲಂಘನೆ ಎಂದು ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬೆಂಗಳೂರಿನಲ್ಲಿ ಹೊಂದಿರುವ ಪ್ರೊಟೆಕ್ಟರ್ ಆಫ್ ಇಮಿಗ್ರೆಂಟ್ಸ್ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿರುವ ಕುರಿತು ವರದಿಯಾಗಿದೆ.
Comments are closed.