Bengaluru: ಭಾರಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರ ಸಮಸ್ಯೆಯನ್ನು ನೀಗಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು: ಸಿದ್ದರಾಮಯ್ಯ

Share the Article

Bengaluru: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ವ್ಯಾಪಕ ತೊಂದರೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ್ದು ಈ ವೇಳೆ ಭಾರೀ ಮಳೆಯಿಂದಾಗಿ ನಗರದಲ್ಲಿ ಸೃಷ್ಟಿಯಾಗಿರುವ ಅನಾಹುತಕ್ಕೆ ಸಿಲುಕಿರುವ ಜನರ ನೆರವಿಗೆ ಕೂಡಲೆ ಧಾವಿಸಬೇಕು, ಜನರ ಸಮಸ್ಯೆಯನ್ನು ನೀಗಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ (Bengaluru) ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪ್ರವಾಹ ಸೃಷ್ಟಿಯಾಗಿರುವ ಬಡಾವಣೆಗಳಲ್ಲಿ ನೀರು ಹೊರಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು. ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಡೆಯಲು ಸೂಕ್ತ ಚರಂಡಿ, ರಾಜಕಾಲುವೆ ಹೂಳು ತೆಗೆಯಬೇಕು. ಈ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆಯೂ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಮುಂಗಾರು ಆರಂಭಕ್ಕೂ ಮುನ್ನ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

Comments are closed.