Arnab Goswami: ಸುಳ್ಳು ಮಾಹಿತಿ ನೀಡಿ ಪ್ರಸಾರ ಆರೋಪ: ಅಮಿತ್-ಅರ್ನಬ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ ಕಾಂಗ್ರೆಸ್

Arnab Goswami: ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಘಟಕ ಎಫ್‌ಐಆರ್ ದಾಖಲು ಮಾಡಿದೆ.

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಅವರು ದೂರು ನೀಡಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬಹಿರಂಗವಾಗಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಘೋರ ಮತ್ತು ಕ್ರಿಮಿನಲ್ ಪ್ರೇರಿತ ಅಭಿಯಾನದ ಮಾಸ್ಟರ್ ಮೈಂಡ್ ಆಗಿದ್ದಾರೆ ಇವರಿಬ್ಬರು ಎಂದು ಸ್ವರೂಪ್ ಆರೋಪ ಮಾಡಿದ್ದಾರೆ.
ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ಅಮಿತ್ ಮಾಳವೀಯ, ಅರ್ನಬಲ್ ಗೋಸ್ವಾಮಿ ನೀಡಿದ್ದಾರೆ ಎಂದು ಸ್ವರೂಪ್ ದೂರಿದ್ದಾರೆ.
Comments are closed.