Dr G Parameshwar: ತನ್ನ ಒಡೆತನದ ಸಿದ್ದಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ – ಪರಮೇಶ್ವರ್ ಫಸ್ಟ್ ರಿಯಾಕ್ಷನ್

Share the Article

G Parameshwar : ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರ ಒಡೆತನದ ತುಮಕೂರಿನ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳ ದಾಳಿ ನಡೆದಿದೆ. ಇದೀಗ ಈ ಕುರಿತು ಮೊದಲ ಬಾರಿಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಎಲ್ಲರಿಗೂ ಕಾನೂನು ಒಂದೇ, ಆ ಕಾನೂನನ್ನು ನಾನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ. ಎಂದು ತಿಳಿಸಿದರು.

ಅಲ್ಲದೆ ಇಡಿ ಅಧಿಕಾರಿಗಳಿಗೆ ನಾನು ಸಹಕಾರ ನೀಡುತ್ತೇನೆ. ಇಡಿ ದಾಳಿ ಮಾಡಿರುವ ಉದ್ದೇಶ ನನಗೆ ಗೊತ್ತಿಲ್ಲ. ಅಕೌಂಟ್ಸ್, ದಾಖಲೆಗಳನ್ನೂ ಇಡಿ ಅಧಿಕಾರಿಗಲು ಕೇಳಿದ್ದಾರೆ. ಇನ್ನೂ ಇಡಿ. ಅಧಿಕಾರಿಗಲು ಪರಿಶೀಲನೆ ಮಾಡುತ್ತಿದ್ದಾರೆ. ಸಂಸ್ಥೆ ಮೂಲಕ ನಾವು ಅಳಿಲು ಸೇವೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Comments are closed.