Puttur: ಗ್ಯಾಸ್‌ ಟ್ಯಾಂಕರ್‌ ಪಲ್ಟಿ: ಚಾಲಕನಿಗೆ ಗಾಯ

Share the Article

Puttur: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್‌ ಬಳಿ ಗ್ಯಾಸ್‌ ಟ್ಯಾಂಕರೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.

ಗಾಯಗೊಂಡ ಚಾಲಕ ಉತ್ತರ ಪ್ರದೇಶದ ನಿವಾಸಿ ರಾಕೇಶ್‌ ಯಾದವ್‌ (45) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್‌ ಸಾಗಿಸುತ್ತಿದ್ದ ಟ್ಯಾಂಕರ್‌, ಕೊಡ್ಯಕಲ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಆತನನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ಯಾಸ್‌ ಟ್ಯಾಂಕರಿನಿಂದ ಯಾವುದೇ ಅನಿಲ ಸೋರಿಕೆ ಆಗಿಲ್ಲ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Comments are closed.