Kumaraswamy : ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ’ ಎಂದು ಪೋಸ್ಟ್, ಕೆಲವೇ ಹೊತ್ತಲ್ಲಿ ಡಿಲೀಟ್ – ಮೋದಿಗೆ ಹೆದರಿ ಡಿಲೀಟ್ ಮಾಡಿದ್ರ HDK?

Kumaraswamy : ಬೆಂಗಳೂರಿನ ಚಂದಾಪುರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕನ್ನಡ ಮಾತನಾಡಲು ನಿರಾಕರಿಸಿದ್ದ ಮ್ಯಾನೇಜರ್ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ’ ಎಂದು ಉದ್ದದ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ಕ್ಷಣಾರ್ಧದಲ್ಲಿಯೇ ಆ ಪೋಸ್ಟ್‌ಅನ್ನು ಡಿಲೀಟ್ ಮಾಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕುಮಾರಸ್ವಾಮಿ ಪೋಸ್ಟ್ ನಲ್ಲಿ ಏನಿತ್ತು?
“ಚಂದಾಪುರ ಎಸ್‌ಬಿಐ ಅಧಿಕಾರಿಯೊಬ್ಬರು ಕನ್ನಡ ಮಾತನಾಡಲು ನಿರಾಕರಿಸಿದ್ದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕನ್ನಡ ಭಾಷೆಗೆ ಗೌರವ ನೀಡುವುದು ಕನ್ನಡಿಗರಿಗೆ ಗೌರವ ನೀಡುವುದಕ್ಕೆ ಸಮಾನವಾಗಿದೆ. ಈ ದುರ್ವತ್ರನೆಗೆ ಕಾರಣರಾದ ಅಧಿಕಾರಿಯನ್ನು ವರ್ಗಾಯಿಸಿದ ಎಸ್‌ಬಿಐನ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಇಂತಹ ಘಟನೆ ಮತ್ತೆ ಮರುಕಳಿಸಬಾರದು. ಬ್ಯಾಂಕ್ ನೌಕರರು ತಾವು ಸೇವೆ ಸಲ್ಲಿಸುವ ಕಚೇರಿಯಲ್ಲಿ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸುವುದು ಬಹಳ ಮುಖ್ಯ ಸ್ಥಳೀಯ ಭಾಷೆಯನ್ನು ಅಗೌರವಿಸುವುದು ಸಾರ್ವಜನಿಕ ಸೇವೆಯ ಮನೋಭಾವವನ್ನು ಉಲ್ಲಂಘಿಸುತ್ತದೆ” ಎಂದಿದ್ದರು.
ಮುಂದುವರೆದು, “ಸಾರ್ವಜನಿಕರೊಂದಿಗೆ ವ್ಯವಹರಿಸುವ ನೌರರು ಪ್ರಜಾಪ್ರಭುತ್ವದಲ್ಲಿ ಗ್ರಾಹಕರು ಸರ್ವೋಚ್ಚರು ಮತ್ತು ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸುವುದು ಕೇವಲ ಸೌಜನ್ಯವಲ್ಲ – ಅದು ಒಂದು ಜವಾಬ್ದಾರಿ ಎಂಬುದನ್ನು ನೆನಪಿನಲ್ಲಿಡಬೇಕು. ಇಂತಹ ಘಟನೆಗಳನ್ನು ಹಗುರವಾಗಿ ಪರಿಗಣಿಸಬಾರದು. ಎಸ್‌ಬಿಐ ಸೇರಿದಂತೆ ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳು ಭಾಷಾ ಗೌರರವನ್ನು ಎತ್ತಿಹಿಡಿಯಲು ಮತ್ತು ಅಂತಹ ನಡವಳಿಕೆ ಪುನರಾವರ್ತನೆಯಾಗದಂತೆ ತಮ್ಮ ಸಿಬ್ಬಂದಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು. ‘ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮ’!!” ಎಂದು ಹೇಳಿದ್ದರು.
ಸದ್ಯ ಕುಮಾರಸ್ವಾಮಿ ಅವರು ಪೋಸ್ಟ್ ಹಾಕಿ ಕೆಲವೇ ಕ್ಷಣಗಳಲ್ಲಿ ಡಿಲೀಟ್ ಮಾಡಿರುವ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಆಗುತ್ತಿದ್ದು ಕುಮಾರಸ್ವಾಮಿ ಅವರು ಪ್ರಧಾನಿ ಮೋದಿಗೆ ಹೆದರಿ ಪೋಸ್ಟ್ ಡಿಲೀಟ್ ಮಾಡಿದರಾ ಎಂಬ ಪ್ರಶ್ನೆಗಳೂ ವ್ಯಕ್ತವಾಗುತ್ತಿವೆ.
Comments are closed.