Karnataka Gvt: ಬೂಕರ್ ಪ್ರಶಸ್ತಿ ಗೆದ್ದ ಬಾನು ಮುಷ್ತಾಕ್‌ಗೆ ಜಿ ಕೆಟಗರಿ ನಿವೇಶನ – ಕರ್ನಾಟಕ ಸರಕಾರದಿಂದ ಮಹತ್ವದ ನಿರ್ಧಾರ

Share the Article

Karnataka Gvt: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (International Booker Prize 2025) ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ( g category site) ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ (Karnataka Cabinet) ನಿರ್ಧರಿಸಿದೆ.

ಹೌದು, ಅಂತರಾಷ್ಟ್ರೀಯ ಬುಕರ್‌ ಪ್ರಶಸ್ತಿಗೆ ಭಾಜನರಾದ ಲೇಖಕಿ ಬಾನು ಮುಷ್ತಾಕ್‌ ಹಾಗೂ ಅನುವಾದಕಿ ದೀಪಾ ಭಾಸ್ತಿ ಅವರಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದ್ದು, ಬಾನು ಮುಷ್ತಾಕ್‌ ಅವರು ಒಪ್ಪಿದರೆ ಬಿಡಿಎ ಜಿ ಕೆಟಗರಿ ನಿವೇಶನ ನೀಡಲು ತೀರ್ಮಾನಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಎದೆಯ ಹಣತೆ ಕೃತಿಯ ಮೂಲ ಲೇಖಕಿ ಬಾನು ಮುಷ್ತಾಕ್‌ ಹಾಗೂ ಈ ಕೃತಿಯನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡಿದ ದೀಪಾ ಭಾಸ್ತಿ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ತಂದಿರುವ ಅವರು ನಾಡಿನ ಹೆಮ್ಮೆ ಎಂದು ಹೇಳಿದರು. ಇದೇ ವೇಳೆ ಬಾನು ಮುಷ್ತಾಕ್‌ ಅವರು ಒಪ್ಪಿದರೆ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಿ ಕೆಟಗರಿ ನಿವೇಶನ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದು ಮೂಲ ಲೇಖಕಿಯಾದ ಬಾನು ಮುಷ್ತಾಕ್‌ ಅವರು ಒಬ್ಬರಿಗೆ ಮಾತ್ರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

Comments are closed.