ಅತ್ಯಾಚಾರ ಆರೋಪಿಗಳ ರೋಡ್ ಶೋ: ಮತ್ತೊಮ್ಮೆ ಖಾಕಿ ವಶಕ್ಕೆ 

Share the Article

Hanagal: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ‘ರೋಡ್ ಶೋ’ ನಡೆಸಿ ಪುಂಡಾಟಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಈಗ ಮತ್ತೆ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಇಂದು ಹಾವೇರಿಯಲ್ಲಿ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದ್ದು, ಜಾಮೀನು ನೀಡುವಾಗ “ಮತ್ತೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಕೂಡದು ಮತ್ತು ತಪ್ಪದೇ ನ್ಯಾಯಾಲಯಕ್ಕೆ ಹಾಜರಾಗಬೇಕು” ಎಂಬ ಷರತ್ತುಗಳನ್ನು ನೀಡಲಾಗಿತ್ತು. ಆದರೆ, ಜಾಮೀನು ಪಡೆದು ಜೈಲಿನಿಂದ ಹೊರಬರುತ್ತಿದ್ದಂತೆ, ಈ ಆರೋಪಿಗಳು ರೋಡ್ ಶೋ ನಡೆಸಿ, ಪುಂಡಾಟಿಕೆ ಮಾಡಿರುವ ಘಟನೆ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.

Comments are closed.