ಕರಾವಳಿಗೆ ಚಂಡಮಾರುತದ ಭೀತಿ; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ!

Share the Article

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಉಚಿತದ ಪರಿಣಾಮವಾಗಿ ದ.ಕ ಹಾಗೂ ಉಡುಪಿ ಉಭಯ ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತದ ಭೀತಿ ಎದುರಾಗಿರುವುದರಿಂದ ಮೇ 25 ರಿಂದ ಮೇ 28ರ ವರೆಗೆ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಭಯ ಕರಾವಳಿ ಜಿಲ್ಲೆ ಸೇರಿದಂತೆ ಉತ್ತರ ಕನ್ನಡ ಭಾಗಕ್ಕೂ ಅಪ್ಪಳಿಸಲಿರುವ ಈ ಚಂಡಮಾರುತವು ಗಂಟೆಗೆ 45 ರಿಂದ 55 km ವೇಗದಲ್ಲಿ ಬೀಸಲಿದೆ ಎಂದು ತಿಳಿದುಬಂದಿದೆ.ಹೀಗಾಗಿ ಮೀನುಗಾರರು ಯಾರೂ ಕೂಡಾ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅದೇ ರೀತಿ ಉಭಯ ಜಿಲ್ಲೆಗಳಲ್ಲೂ ಸಹಾ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Comments are closed.