ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ!

Share the Article

Mangaluru: ಕರ್ನಾಟಕ ಲೋಕಾಯುಕ್ತ ಮಂಗಳೂರು (Mangaluru) ವಿಭಾಗದ ತಂಡವು ಶುಕ್ರವಾರ ಪಿಲಿಕುಳಕ್ಕೆ ದಿಢೀ‌ರ್ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳನ್ನು ಪತ್ತೆ ಹಚ್ಚಿದೆ.

 

ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ರವರು ಹಾಗೂ ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖ‌ರ್ ಸಿಬ್ಬಂದಿಯವರೊಂದಿಗೆ ಮಂಗಳೂರಿನ ಪಿಲಿಕುಳಕ್ಕೆ ದಿಢೀ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ.

 

ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರು ಕೂಡ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲಪಿಲಿಕುಳದ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬಂದಿದೆ. ಜೊತೆಗೆ ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರು ಕೂಡ ಪ್ರಾಧಿಕಾರವು ಈ ವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬಂದಿದ್ದು, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬಂದಿದೆ.

 

ಇನ್ನು ಟೆಂಡ‌ರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಾದ(ಪ್ರಭಾರ) ಕುಮಾರಚಂದ್ರ ಅವರು ತಿಳಿಸಿದ್ದಾರೆ.

Comments are closed.