Subrahmanya: ಚಲಿಸುತ್ತಿದ್ದ ಕಾರಿನ ಮೇಲೆ ಕಡಬದಲ್ಲಿ ಮರ ಬಿದ್ದು ಮಗು ಸೇರಿ ನಾಲ್ವರು ಪಾರು-ಕಾರು ಜಖಂ

Share the Article

Subrahmanya: ಬಾರಿ ಗಾಳಿ ಮಳೆಯಿಂದಾಗಿ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಮೇ 25 ರ ರವಿವಾರ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಭಾಗದಿಂ ಇಚ್ಚಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್‌ ಮರ ಮುರಿದು ಬಿದ್ದಿದ್ದು, ಪರಿಣಾಮ ಚಾಲಕ, ಇಬ್ಬರು ಮಹಿಳೆಯರು, ಒಂದು ಮಗು ಕಾರಿನಲ್ಲಿ ಸಿಲುಕಿದ್ದರು. ಗಾಯಾಳುಗಳನ್ನು ಹೊರತೆಗೆದು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ವರದಿಯಾಗಿದೆ.

Comments are closed.