Siddaramaiah: ರಾಜ್ಯದಲ್ಲಿ ಹೊಸದಾಗಿ 184 ಇಂದಿರಾ ಕ್ಯಾಂಟೀನ್‌ಗಳ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah: ಹಿನಕಲ್‌ನಲ್ಲಿ 9 ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ. 2017ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದ್ದು, ಹೊಸದಾಗಿ 184 ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ.
Comments are closed.