School Holiday: ಭಾರೀ ಮಳೆ: ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪಿಯು ಕಾಲೇಜುಗಳಿಗೆ 27,28 ರಂದು ರಜೆ ಘೋಷಣೆ

Share the Article

School Holiday: ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ರೆಡ್‌ ಅಲರ್ಟ್‌ ಜೊತೆ ನಿಲ್ಲದ ಮಳೆಯ ಕಾರಣ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸಿಬಿಎಸ್‌ಸಿ, ಪದವಿ ಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 27.05.2025 ಮತ್ತು ದಿನಾಂಕ: 28.05.2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ.
24X7 ಕಂಟ್ರೋಲ್ ರೂಮ್ ನಂ. 1077 ಅಥವಾ 0824 2442590

Comments are closed.