Kukke Subramanya: ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ: NDRF ತಂಡ ಪುತ್ತೂರಿಗೆ ಆಗಮನ

Kukke Subramanya: ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದೆ. ಭಕ್ತರು ನದಿ ನೀರನ್ನು ತಲೆಗೆ ಚಿಮುಕಿಸಲು ಅನುಮತಿ ನೀಡಲಾಗಿದೆ.

ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿದೆ. ಮಳೆ ಅಬ್ಬರದ ಕಾರಣ ಪುತ್ತೂರಿಗೆ 25 ಸಿಬ್ಬಂದಿಯ ಎನ್ಡಿಆರ್ಎಫ್ ಸಿಬ್ಬಂದಿ ಆಗಮನಿಸಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಸರ್ವ ಸನ್ನದ್ಧರಾಗಿರಲು ಸೂಚನೆಯನ್ನು ನೀಡಲಾಗಿದೆ.
Comments are closed.