Harassment: ಬುರ್ಖಾ ಧರಿಸಿದ ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಸಿಸಿಟಿವಿ ವಿಡಿಯೋ ಬೆಳಕಿಗೆ

Share the Article

Harassment: ಉತ್ತರ ಪ್ರದೇಶದ ಮೀರತ್‌ನಲ್ಲಿ ಬುರ್ಖಾ ಧರಿಸಿದ ಮಹಿಳೆಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ. ಆ ಮಹಿಳೆ ಮಧ್ಯಾಹ್ನ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ಆಕೆಗೆ ಮುತ್ತಿಕ್ಕಿ, ದೌರ್ಜನ್ಯ ಎಸಗಿ ಪರಾರಿಯಾಗಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನನ್ನು ಗದರಿಸಿ ಅಲ್ಲಿಂದ ಹೊರಟುಹೋಗಿದ್ದಾಳೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Comments are closed.