Uppinangady: ಉಪ್ಪಿನಂಗಡಿ: ಮರಬಿದ್ದು, ಕಾರು ಜಖಂ: 3 ಮಂದಿ ಅಪಾಯದಿಂದ ಪಾರು

Share the Article

Uppinangady: ಉಪ್ಪಿನಂಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್‌ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.

ಕಾರಿನಲ್ಲಿ ಇದ್ದ 3 ಮಂದಿ ಅಪಾಯದ ಅರಿವು ತಿಳಿಯುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಬ್ದುಲ್‌ ಸಲೀಂ ಎಂಬುವವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್‌, ಅಬ್ಬಾಸ್‌, ರಮ್ಲಾನ್‌ ಕುಳಿತಿದ್ದರು. ಈ ವೇಳೆ ಮರ ಬೀಳು ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ. ಅಷ್ಟರಲ್ಲಿ ಮಾವಿನ ಮರ ಕಾರಿನ ಮೇಲೆ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Comments are closed.