Mangaluru : ಮುಸ್ಲಿಮರ ಮೇಲೆ ನಿರಂತರ ದೌರ್ಜನ್ಯ – ದ. ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ

Share the Article

 

Mangaluru : ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮುಸ್ಲಿಮರ ಸರಣಿ ಕೊಲೆಗಳು ನಡೆಯುತ್ತಿವೆ. ಮುಸ್ಲಿಮರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಇಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಇದೇ ಮೇ 29ರಂದು ಸಭೆ ಕರೆಯಲಾಗಿದೆ.

 

ಮುಸ್ಲಿಮರ ಕಡೆಗಣನೆ ಬೇಸತ್ತು ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಯಲ್ಲಿರುವ ಮುಸ್ಲಿಮ್ ಮುಖಂಡರು ಮತ್ತು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ.

 

ಅಂದಹಾಗೆ ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಲು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವು ಮೇ 29ರಂದು ಅಪರಾಹ್ನ 2:30ಕ್ಕೆ ನಗರದ ಬೋಳಾರ ಶಾದಿಮಹಲ್ ನ ಸಭಾಂಗಣದಲ್ಲಿ ಸಭೆ ಕರೆದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್ ಮತ್ತು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.