Guest Teachers: 11, 000 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ!!

Guest Teachers : 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಬರೋಬ್ಬರಿ 11000 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖ (1) ರನ್ವಯ 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ.
Comments are closed.