KPCL AE and JE Posts: KPTCL ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿ ರದ್ದು, ಮರುಪರೀಕ್ಷೆಗೆ ಹೈಕೋರ್ಟ್‌ ಆದೇಶ

Share the Article

KPCL AE and JE Posts: ಮೇ 8,2024 ರ ಕೆಪಿಸಿಎಲ್‌ನ ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿಯನ್ನು ರದ್ದು ಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್‌ ಬುಧವಾರ ಆದೇಶ ಹೊರಡಿಸಿದೆ. ಹೀಗಾಗಿ ಫೆ.18,2024 ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

2022,ಫೆ.21 ರಂದು ಎಇ,ಜೆಇ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಆಗಸ್ಟ್‌ 17 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟ ಮಾಡಲಾಗಿತ್ತು. ಫೆ.1, 2023 ರಂದು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡುವಾಗ ಪಾಲಿಸಬೇಕಾದ ನಿಯಮಗಳ ಕುರಿತು ರಾಜ್ಯ ಸರಕಾರ ಸುತ್ತೋಲೆಯನ್ನು ಹೊರಡಿಸಿತ್ತು. ಆ ಸುತ್ತೋಲೆ ಪ್ರಕಾರ ಕೆಪಿಎಸ್‌ಸಿ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿ ಮಾಡಿತ್ತು.

ಆಗಸ್ಟ್‌ 17 ರಂದು ಜೆಇ,ಎಇ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಆದರೆ ಕೆಪಿಎಸ್‌ಸಿಯ ವಿಳಂಬ ನೀತಿಯಿಂದ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ.

Comments are closed.