CM Siddaramiah : ದಕ್ಷಿಣ ಕನ್ನಡದಲ್ಲಿ ಮುಸ್ಲಿಂ ಯುವಕನ ಬರ್ಬರ ಹತ್ಯೆ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

CM Siddaramiah : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನೆಕ್ತರು ಹರಿಯುತ್ತಲೇ ಇದೆ. ಇದೀಗ ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ನಡೆದಿದೆ. ಇದೀಗ ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾಗಿದ್ದಾನೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ ಅವರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.
ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಯುವಕನೊಬ್ಬನ ಹತ್ಯೆ ಆಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ” ಎಂದರು.
Comments are closed.