Jan Aushadhi Kendra : ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ !! ಸರ್ಕಾರಕ್ಕೆ ಭಾರೀ ಮುಖಭಂಗ

Share the Article

Jan Aushadhi Kendra: ಕೇಂದ್ರ ಸರ್ಕಾರವು ಬಡ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ತೆರೆದ ‘ಜನ ಔಷಧ’ ಕೇಂದ್ರಗಳನ್ನು ಇನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಸ್ವತಹ ಕಾಂಗ್ರೆಸ್ ಶಾಸಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೌದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನ ಔಷಧಿ ಕೇಂದ್ರಗಳಲ್ಲಿ ಬಡವರು ಮತ್ತು ಮದ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ದೊರೆಯುತ್ತವೆ. ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲೂ ಜನ ಔಷಧಿ ಕೇಂದ್ರಗಳಿವೆ. ಈ ಜನ ಔಷಧಿ ಕೇಂದ್ರಗಳನ್ನು ಬಂದ್​ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕರೇ ವಿರೋಧಿಸಿದ್ದಾರೆ. ಅಲ್ಲದೇ ಜನೌಷಧಿ ಕೇಂದ್ರ ತರವಿಗೆ ನನ್ನದು ವಿರೋಧವಿದೆ ಎಂಬುದಾಗಿ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಆದಂತೆ ಕಾಣುತ್ತಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಕೊರೋನಾ, ಡೆಂಗ್ಯೂ ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರಗಳಿಂದ ಬಡವರಿಗೆ ಸಹಾಯವಾಗುತ್ತಿತ್ತು. ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಔಷಧಿ ಕೂಡ ಸಿಗುತ್ತಿದ್ದವು ಎಂದರು.

ಅಲ್ಲದೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಇರುವುದು ಸೂಕ್ತವಾಗಿದೆ. ಇಂತಹ ಜನೌಷಧಿ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆ ಆವರಣದಿಂದ ತೆರವುಗೊಳಿಸುತ್ತಿರೋದಕ್ಕೆ ನನ್ನ ವಿರೋಧವಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ತಿಳಿಸಿದರು.

Comments are closed.